Oplus_131072

ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.

ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ. ಮಧ್ಯಾಹ್ನದ ಸಮಯ ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು.

Oplus_131072

ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು.ಶಾಲೆಗಳು, ಎಲ್ಲಾ ಸಂಸ್ಥೆಗಳು ಆ ಬಗ್ಗೆ ಗಮನ ಕೊಡಬೇಕು. ಆಹಾರದ ಬಗ್ಗೆಯೂ ಗಮನ ಕೊಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು. ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ ಎಂದರು.

Leave a Reply

Your email address will not be published. Required fields are marked *