
ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಇಂದು ನಮ್ಮೊಂದಿಗೆ ಇದ್ದಿದ್ದರೆ ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಅವರಿಲ್ಲದೇ ಅಭಿಮಾನಿಗಳು ಜನ್ಮದಿನ ಆಚರಿಸುವಂತಾಗಿದೆ. ಪ್ರತಿವರ್ಷ ಮಾರ್ಚ್ 17 ಬಂತೆಂದರೆ ʼಅಪ್ಪುʼ ಅಭಿಮಾನಿಗಳು ಸಡಗರದಿಂದ ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಇದೇ ವೇಳೆ ಸಮಾಧಿ ಬಳಿ ಅಭಿಮಾನಿಗಳು ಜಮಾಯಿಸಿದ್ದು, ರಕ್ತದಾನ, ಅನ್ನದಾನದಂತಹ ಕಾರ್ಯಕ್ರಮ ನಡೆಯುತ್ತಿದೆ. ಅಪ್ಪು ಸಮಾಧಿಯನ್ನು ವಿಶೇಷ ಹೂ ಗಳಿಂದ ಅಲಂಕರಿಸಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಅಭಿಮಾನಿಗಳು ಅಪ್ಪು ಸಮಾಧಿ ಬಳಿ ನಿಂತು ಶುಭಾಶಯ ತಿಳಿಸಿ ಫೋಟೋ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟಿದ್ದಾರೆ.ಪುನೀತ್ ರಾಜ್ ಕುಮಾರ್ ಅವರ ಜನ್ಮದಿನದ ಪ್ರಯುಕ್ತ ಅವರ ಸೂಪರ್ ಹಿಟ್ ಸಿನಿಮಾ ‘ಅಪ್ಪು’ ಮತ್ತೊಮ್ಮೆ ರೀಲೀಸ್ ಆಗಿದ್ದು, ಇದು ಈಗಾಗಲೇ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕದ ಅನೇಕ ಚಿತ್ರಮಂದಿರಗಳಲ್ಲಿ ಈ ಸಿನಿಮಾಗೆ ಅಪಾರ ಕ್ರೇಜ್ ಇರುವುದರಿಂದ, ಅಭಿಮಾನಿಗಳು ಥಿಯೇಟರ್‌ಗಳಿಗೆ ಬಂದು ಅಪ್ಪು ನೆನಪಿನಲ್ಲಿ ಸಂಭ್ರಮಿಸುತ್ತಿದ್ದಾರೆ.

