
ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಇದೀಗ ಒಂದೇ ಒಂದು ದಿನ ಬಾಕಿಯಿದೆ.ಸುಮಾರು 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.ರಾಜ್ಯದ 2,818 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 01 ನಡೆಯಲಿದೆ.

4.61 ಲಕ್ಷದ ಬಾಲಕರು ಹಾಗೂ 4.34 ಲಕ್ಷದ ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ.ಎಸ್‌ಎಸ್‌ಎಲ್‌ಸಿ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಇರಲಿದೆ. ಅವರು ಮನೆಯಿಂದ ಹೊರಡುವ ಹತ್ತಿರದ ನಿಲ್ದಾಣದಿಂದ ಪರೀಕ್ಷಾ ಕೇಂದ್ರದವರೆಗೂ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವಂತೆ ಕರ್ನಾಟಕ ರಾಜ್ಯ ರಸ್ತೆ ನಿಗಮ ಆದೇಶವನ್ನು ಹೊರಡಿಸಿದೆ.



