ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.ತೀರ್ಥಹಳ್ಳಿಯ ಬೆಟ್ಟಮಕ್ಕಿ ನಿವಾಸಿ, ರಾಘವೇಂದ್ರ ಕಲ್ಕೂರ್ ಹಾಗೂ ಉಷಾ ದಂಪತಿಗಳ ಪುತ್ರಿ ದೀಕ್ಷಾ ತೀರ್ಥಹಳ್ಳಿಯ ವಾಗ್ದೇವಿ ಪಿ.ಯು.ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.ಅಪ್ಪ ಅಮ್ಮ ಇಬ್ಬರೂ ಸರಕಾರಿ ಶಾಲೆ ಶಿಕ್ಷಕರಾಗಿದ್ದು ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

Oplus_131072

ತಂದೆ ರಾಘವೇಂದ್ರ ಕಲ್ಕೂರು ಮೇಗರವಳ್ಳಿ ಶಾಲೆಯಲ್ಲಿ ಶಿಕ್ಷಕ, ತಾಯಿ ಉಷಾ.ವಿ. ತೀರ್ಥಹಳ್ಳಿಯ ಬಾಲಕಿಯ ಪ್ರೌಢಶಾಲೆ ಶಿಕ್ಷಕಿಯಾಗಿದ್ದು, ಮಗಳ ಅಭೂತಪೂರ್ವ ಸಾಧನೆಗೆ ತೀರ್ಥಹಳ್ಳಿ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *