• ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘತಕ್ಕೆ 51 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಬಗ್ಗೆ ಟ್ವೀಟ್​ ಮಾಡಿದ ಅವರು, ‘ಭಾನುವಾರ ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 51 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪೈಕಿ ಹಲವು ಪ್ರಕರಣಗಳು ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸಿದೆ. ರಸ್ತೆ ಸುರಕ್ಷತೆಗೆ ಎಲ್ಲ ಪಾಲುದಾರರಿಂದ ಜವಾಬ್ದಾರಿಯುತ ನಡವಳಿಕೆಯ ಅಗತ್ಯವಿದೆ’ ಎಂದರು.

Leave a Reply

Your email address will not be published. Required fields are marked *