- ಕರುನಾಡ ಕುಳ್ಳ ದ್ವಾರಕೀಶ್ ಗೆ ಭಾವಪೂರ್ಣ ಶ್ರದ್ದಾಂಜಲಿ

ಕನ್ನಡ ಚಿತ್ರ ರಂಗದ ಹಿರಿಯ ನಟ ದ್ವಾರಕೀಶ್(81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕನ್ನಡದ ಕುಳ್ಳ ಎಂದೇ ಹೆಸರಾಗಿದ್ದ ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ದ್ವಾರಕೀಶ್ ಅವರು 1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.


