ಈ ಭಾರಿಯ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಹಿಂದೆಂದಿಗಿಂತಲೂ ಭಿನ್ನವಾಗಿ ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ನಡೆಸದೆ ದಲಿತ ಹಿಂದುಳಿದ ಅಲ್ಪಸಂಖ್ಯಾತರ ಶೇ 90%ರಷ್ಟು ಮತಗಳು ಈ ಭಾರಿ ಪರವಿದ್ದು, ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೀತಾ ಶಿವರಾಜ್ ಕುಮಾರ್ ರವರಿಗೆ ಒಳಿಯಲಿದೆ. ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಪಡುವಳ್ಳಿ ಹರ್ಷೇಂದ್ರ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಅಭ್ಯರ್ಥಿ ಪರ ಮತ ಯಾಚನೆಯಲ್ಲಿ ತೊಡಗಿರುವ ಅವರು ಈ ಭಾರಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವರ್ಗದವರು ಶ್ರೀಮತಿ ಗೀತಾ ಶಿವರಾಜ್ ಕುಮಾರ್ ರವರನ್ನು ಮೆಚ್ಚಿಕೊಂಡಿದ್ದಾರೆ. ರಾಜ್ಯದ ಹಿಂದುಳಿದ ವರ್ಗದ ಪರ ಧ್ವನಿಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಋಣ ತೀರಿಸಲು ಮತದಾರರು ಪಕ್ಷಾತೀತವಾಗಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ರವರನ್ನು ಗೆಲ್ಲಿಸುವುದು ಖಚಿತ ಎಂದಿದ್ದಾರೆ.

Leave a Reply

Your email address will not be published. Required fields are marked *