• ರಿಸಲ್ಟ್ ನೋಡಲು ಹೀಗೆ ಮಾಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 09 ರಂದು ಶಿಕ್ಷಣ ಇಲಾಖೆಯ ವೆಬ್‌ಸೈಟ್​​​ನಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ ಪ್ರಕಟಿಸಲಾಗುತ್ತದೆ. *ಎಸ್​ಎಸ್​ಎಲ್​​ಸಿ ರಿಸಲ್ಟ್ ಯಾವ ವೆಬ್​​ಸೈಟ್​ನಲ್ಲಿ ದೊರೆಯುತ್ತದೆ?* ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ?ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿಹೊಸ ಲಾಗಿನ್ ಪುಟವು ತೆರೆಯುತ್ತದೆನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ.

Leave a Reply

Your email address will not be published. Required fields are marked *