- ಶಿವಮೊಗ್ಗಕ್ಕೆ ಮೂರನೇ ಸ್ಥಾನ
- ಯಾದಗಿರಿಗೆ ಕೊನೆಯ ಸ್ಥಾನ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ.ಈ ಮೂಲಕ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.ಇನ್ನು ದ್ವಿತೀಯ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆಯದ್ದಾಗಿದೆ.ರಾಜ್ಯದಲ್ಲಿ 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 2023-24 ನೇ ಸಾಲಿನ ಶೇಕಡಾವಾರು ಫಲಿತಾಂಶ 73.40ಕ್ಕೆ ಕುಸಿತವಾಗಿದೆ.ಶಿವಮೊಗ್ಗಕ್ಕೆ 3ನೇ ಸ್ಥಾನ ಶಿವಮೊಗ್ಗ ಜಿಲ್ಲೆಯು ಅಭೂತಪೂರ್ವ ಸಾಧನೆ ಮಾಡಿದೆ. ಕಳೆದ ವರ್ಷ ಶೇ.84.04 ಫಲಿತಾಂಶದೊಂದಿಗೆ 29ನೇ ಸ್ಥಾನದಲ್ಲಿದ್ದ ಜಿಲ್ಲೆಯು ಈ ಬಾರಿ ಶೇ.88.67 ಫಲಿತಾಂಶದೊಂದಿಗೆ ಮೂರನೇ ಸ್ಥಾನ ಗಳಿಸಿದೆ.


ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ
