- ಕಾರಿನ ಮೇಲೆ ಏಕಕಾಲಕ್ಕೆ ಬಿದ್ದ ಮರ- ಮೂವರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಜಿಲ್ಲೆಯ ಎನ್ ಆರ್ ಪುರ ತಾಲೂಕಿನಲ್ಲಿ ಜೋರಾದ ಮಳೆ ಗಾಳಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ಸಾವನಪ್ಪಿದ್ದಾರೆ ಕೊಪ್ಪ ಮೂಲದ ಸವಿತಾ (48) ಮೃತ ದುರ್ದೈವಿ.ಇವರು ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದವರೆಂದು ಹೇಳಲಾಗಿದೆ.
ಕಾರಿನ ಮೇಲೆ ಮರ ಬಿದ್ದು ಕಾರಿನಲ್ಲಿದ್ದ ಮೂವರಿಗೂ ಗಂಭೀರ ಗಾಯ
ಕಾರಿನ ಮೇಲೆ ಬೃಹತ್ ಮರ ಬಿದ್ದು ಕಾರು ಸಂಪೂರ್ಣ ಜಖಂ ಆಗಿದೆ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು.ಗಾಯಾಳುಗಳು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.



