- ಪೊಲೀಸರಿಂದ ಶೋಧ ಕಾರ್ಯ ಶುರು

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣ, ಆಡಳಿತ ಕಚೇರಿ ಬಾತ್ ರೂಮ್ ನ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿದೆ. ಕೆಲ ಸಮಯ ಅಂತಕದ ವಾತಾವರಣ ಸೃಷ್ಟಿಯಾಗಿದ್ದು, ಇತ್ತೀಚೆಗೆ ಕೆಲ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸುವ ಕೇಸ್ ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.


