• ಮೋದಿ ಪಟ್ಟಭಿಷೇಕಕ್ಕೆ ಮುಹೂರ್ತ ಫಿಕ್ಸ್

3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ.ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದು ಮೋದಿ ಪ್ರಧಾನಿಯಗಲು ಕಾರಣವಾಗಿದ್ದು, ಈಗಾಗಲೇ ಮೋದಿ ಅಭಿಮಾನಿಗಳು ಎಲ್ಲೆಡೆ ಸಂಭ್ರಮಾಚಾರಣೆಯಲ್ಲಿದ್ದಾರೆ.

Leave a Reply

Your email address will not be published. Required fields are marked *