• ಸುದ್ಧಿಗಾಗಿ ಲಿಂಕ್ ಒತ್ತಿ

2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ.ವಿಚಾರಣೆಯನ್ನು ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ. *ಅರ್ಜಿ ಹಾಕುವುದು ಹೇಗೆ* – https://transport.karnataka.gov.in- ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.- ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.- ನಂಬರ್ ಪ್ಲೇಟ್ ಬದಲಾಯಿಸಲು ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.- ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. (ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶ ಇಲ್ಲ).- ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ.- ಎಚ್‌ಎಸ್‌ಆರ್ ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.- ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ ಎಚ್‌ಎಸ್‌ಆರ್ ಪಿ ಪಡೆಯಬಹುದು.

Leave a Reply

Your email address will not be published. Required fields are marked *