- ಪ್ರಶ್ನೆ ಪತ್ರಿಕೆ ಸೋರಿಕೆ ಅನುಮಾನ?

ಶಿವಮೊಗ್ಗ : ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರಿವ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆಯನ್ನು ರದ್ದು ಪಡಿಸಿ ಮರು ಪರೀಕ್ಷೆ ನಡೆಸಬೇಕು ಎಂದೂ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಸುಜಿತ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅವರ ಮುಖೆನ ರಾಷ್ಟ್ರಪತಿಗಳಿಗೆ ಪತ್ರ ರವಾನಿಸಲಾಗಿದೆ.ಪತ್ರದಲ್ಲಿ ಏನಿದೆ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನೀಟ್ ಪರೀಕ್ಷೆ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಹೇಳಿಕೆ ಫಲಿತಾಂಶ ಕಾರಣದಿಂದ ದೇಶದ ಲಕ್ಷಾಂತರ ಜನ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ. ವಿಧ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂಬುದು ದೇಶದಾದ್ಯಂತ ಇರುವ ವಿದ್ಯಾರ್ಥಿಗಳ ಆಗ್ರಹವಾಗಿದೆ ಒಟ್ಟು 67 ವಿದ್ಯಾರ್ಥಿಗಳು ಮೊದಲ ರಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷೆ ಕೇಂದ್ರದ ಎಂಟು ವಿದ್ಯಾರ್ಥಿಗಳು ಪ್ರಥಮ ರಾಂಕ್ ಮಾಡಿರೋದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಾಗಿದೆ ರಾಂಕ್ ಬಂದಿರುವಲ್ಲಿ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರವಾಗಿರುತ್ತದೆ. ಲೋಕಸಭೆ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನಗಳನ್ನು ಹೆಚ್ಚಿಸಿದೆ ನೀಟ್ ಪರೀಕ್ಷೆ ಫಲಿತಾಂಶ ನಂತರ ದೇಶದ ಹಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಕೂಡಲೇ ಮರು ಪರೀಕ್ಷೆ ನಡೆಸಬೇಕು ಎಂಬುದು ಇಡೀ ದೇಶದ ವೈದ್ಯಕೀಯ ಸೀಟು ಆಕಾಂಕ್ಷಿಗಳು ಹಾಗೂ ಎನ್ ಎಸ್ ಯು ಐ ಆಗ್ರಹವಾಗಿದೆ.

