- ಸಂಜೆ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ

ವಿಧಾನಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಪಕ್ಷದ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯ ವೇಳೆ ಅಣುಕು ಶವ ನಡೆಸುತ್ತಿದ್ದ ವೇಳೆ ತೀವ್ರ ಹೃದಯಾಘಾತವಾಗಿ ಅವರು ಕೊನೆಯುಸಿರೆಳೆದಿದ್ದಾರೆ.ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರು ಕುಸಿದುಬಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.ಇನ್ನು ಮೃತರ ಅಂತ್ಯಸಂಸ್ಕಾರ ಸಂಜೆ 6 ಗಂಟೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.


