- ಸಾವಿನಲ್ಲೂ ಸಾರ್ಥಕತೆ ಮೆರೆದು ಇತರರಿಗೆ ಮಾದರಿ

ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಡಾಲರ್ಸ್ ಕಾಲೊನಿಯಲ್ಲಿ ಇರುವ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು.ನಿನ್ನೇ ರಾತ್ರಿ ಸು 10 ಗಂಟೆ ವೇಳೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಕರೆದೋಯ್ದರು ಚಿಕಿತ್ಸೆ ಫಲಕಾರಿಯಾಗದೆ ಅಸುನಿಗಿದ್ದಾರೆ.ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಇನ್ನು ಸಾವಿನಲ್ಲಿ ಸಾರ್ಥಕತೆ ಮೆರೆದ ಇವರು ಮೃತ ದೇಹವನ್ನು ರಾಮಯ್ಯ ಆಸ್ಪತ್ರೆಗೆ ದಾನ ಮಾಡಿದ್ದಾರೆ.


