- ನನ್ನ ಸೈಡ್ ಆಫ್ ದಿ ಸ್ಟೋರಿಯನ್ನೂ ಕೇಳಿ- ಸಪ್ತಮಿ

ಯುವರಾಜ್ ಕುಮಾರ್ ಮತ್ತು ಶ್ರೀದೇವಿ ನಡುವೆ ಸಪ್ತಮಿ ಗೌಡ ಬಂದಿದ್ದಾರೆ ಅನ್ನುವ ಅನುಮಾನ ಅನೇಕರಲ್ಲಿದೆ. ಖುದ್ದು ಶ್ರೀದೇವಿಯವರೇ ಈ ಆರೋಪವನ್ನ ಮಾಡಿದ್ದಾರೆ. ಸಪ್ತಮಿ ಗೌಡ ಕೂಡ ಶ್ರೀದೇವಿ ಅವರ ವಿರುದ್ಧ ಮಾನನಷ್ಟ ಮೂಕದ್ದಮೆಯನ್ನೂ ಹೂಡಿದ್ದಾರೆ. ಇದರ ನಡುವೆ ಈಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ.ವೈರಲ್ ಆದ ಈ ಆಡಿಯೋದಲ್ಲಿ ಹಾಯ್ ಸರ್ ನಿಮಗೆ ಈಗಾಗ್ಲೇ ವಿಷಯ ಗೊತ್ತಿರುತ್ತೆ ಏನಾಗಿದೆ ಏನು ಅಂತ. ನನ್ನ ಸೈಡ್ ಆಫ್ ದಿ ಸ್ಟೋರಿನೂ ಕೇಳಿ. ನನ್ನಿಂದ ತಪ್ಪಾಗಿಲ್ಲ ಎಂದು ನಾನು ಹೇಳ್ತಿಲ್ಲ. ಖಂಡಿತ ನನ್ನಿಂದ ತಪ್ಪಾಗಿದೆ. ನನ್ನ ಅಮ್ಮನ ಮೇಲೆ ಆಣೆ ಮಾಡಿ ಹೇಳ್ತೀನಿ ಸರ್ ನಾನು ಎಂದಿಗೂ ಸಹ ಗುರುನ (ಯುವ ಮೂಲ ಹೆಸರು) ಮದ್ವೆ ಬಿಟ್ಟು ಬಾ ಅಂತ ಯಾವತ್ತೂ ಹೇಳಿಲ್ಲ. ನೀವು ಬೇಕಿದ್ದರೆ ಅವನನ್ನು ಕೇಳಬಹುದು. ಯಾರನಾದರೂ ಕೇಳಬಹುದು. ಇದನ್ನ ವರ್ಕೌಟ್ ಮಾಡು ಇದು ತಪ್ಪಾಗುತ್ತೆ ಬೇಡ ಎಂದು ನಾನು ತುಂಬಾ ಸಲ ಹೇಳಿದೀನಿ. ಹೌದು ಇದು ನಿಮ್ಮ ಸೆಟ್‌ನಲ್ಲಿ ಆಯ್ತು ಅದಕ್ಕೆ ನಿಮಗೆ ನಮ್ಮ ಮೇಲೆ ಎಷ್ಟೇ ಕೋಪ ಇರಬಹುದು ಸರ್ ಪರವಾಗಿಲ್ಲ ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿಯನ್ನೂ ಕೇಳಿ ಎಂಬ ಮಾತು ಆಡಿಯೋದಲ್ಲಿದೆ.