• ಏನಿದು ಸುದ್ದಿ ಲಿಂಕ್ ಒತ್ತಿ ಓದಿ

ರಾಜ್ಯದ ಗ್ರಾಮ ಪಂಚಾಯಿತಿಗಳ ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1) ಮತ್ತು (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶಿಸಿದೆ.ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ (ಗ್ರಾ.ಪಂ) ಅವರು ನಡವಳಿಯನ್ನು ಹೊರಡಿಸಿದ್ದು, 2024-25 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ:237 ರ ಉಪ ಕ್ರಮ ಸಂಖ್ಯೆ: 01 ರಲ್ಲಿ, ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಎಂದು ಘೋಷಿಸಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *