- ಆದೇಶ ಪತ್ರದಲ್ಲಿ ಏನಿದೆ ಓದಿ

ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿ ಸಲಾಗಿದೆ.ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ.
