- ಏನಿದು ಘಟನೆ ಸುದ್ದಿ ಓದಿ

ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ತಾಂತ್ರಿಕ ಲೋಪದಿಂದ ಧಗಧಗನೆ ಹೊತ್ತಿ ಉರಿದ ಘಟನೆ ಸಾಗರದ ಎಲ್ ಬಿ ಕಾಲೇಜಿನ ಹತ್ತಿರ ನಡೆದಿದೆ.ಬಸ್ ನಲ್ಲಿ ಹಲವು ಪ್ರಯಾಣಿಕರಿದ್ದರು. ತಕ್ಷಣ ಬಸ್‌ನಲ್ಲಿದ್ದ ಸಿಬ್ಬಂದಿಗಳು ಸವಾರರನ್ನು ಕೆಳಗೆ ಇಳಿಸಿದ್ದಾರೆ.ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 12 ಪ್ರಯಾಣಿಕರು ಪಾರಾಗಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವಲ್ಲಿ ನಿರತರಾದರು ಈ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

