- ಬೇಕರಿ ವಸ್ತುಗಳು ಸುಟ್ಟು ಕರಕಲು

ಶಿವಮೊಗ್ಗ :ಎಸ್ಎಲ್ವಿ ಅಯ್ಯಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಎಲ್ಪಿಜಿ ಸಿಲಿಂಡರ್ ಸ್ಫೋಟವಾದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ. ನಿಮಿಷಗಳ ಅಂತರದಲ್ಲಿ 3 ಬಾರಿ ಸ್ಫೋಟವಾಗಿದ್ದು, ಬೇಕರಿಯಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಜೊತೆಗೆ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

