ರಿಷಬ್ ಶೆಟ್ಟಿ ಅವರು ‘ಅತ್ಯುತ್ತಮ ನಟ’ ನ್ಯಾಷನಲ್ ಅವಾರ್ಡ್ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದ್ದಾರೆ. ಅವರಿಗೆ ಆಪ್ತರು, ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪಂಚೆ ಧರಿಸಿ, ದಕ್ಷಿಣ ಭಾರತದ ಸಾಂಪ್ರದಾಯಿಕ ಗೆಟಪ್ನಲ್ಲಿ ರಿಷಬ್ ಶೆಟ್ಟಿ ಅವರು ಗಮನ ಸೆಳೆದಿದ್ದು ವಿಶೇಷವಾಗಿತ್ತು.’ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ಅವರಿಗೆ ಬೆಸ್ಟ್ ಆಕ್ಟರ್ ನ್ಯಾಷನಲ್ ಅವಾರ್ಡ್ ಸಿಕ್ಕಿದೆ. ಪತ್ನಿ ಸಮೇತರಾಗಿ ದೆಹಲಿಗೆ ತೆರಳಿದ ರಿಷಬ್ ಶೆಟ್ಟಿಅವರು ಪ್ರಶಸ್ತಿ ಸ್ವೀಕರಿಸಿ ಖುಷಿಪಟ್ಟಿದ್ದಾರೆ.







