ಕನ್ನಡ ಚಿತ್ರರಂಗದಲ್ಲಿ ಅತಿ ಸಣ್ಣ ವಯಸ್ಸಿನಲ್ಲಿ ಅತಿಹೆಚ್ಚು ಪ್ರಬುದ್ಧತೆಯನ್ನು ಹಾಗೂ ಭರವಸೆಯ ವ್ಯಕ್ತಿ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಗುರುಪ್ರಸಾದ್ ಅವರು ಬೆಂಗಳೂರಿನ ಹೊರವಲಯದ ಅವರ ಮಾದನಾಯಕನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೂರ್ನಾಲ್ಕು ದಿನಗಳು ಕಳೆದರೂ ಯಾರಿಗೂ ಗೊತ್ತಾಗಿಲ್ಲ. ಇನ್ನು ಪಕ್ಕದ ಮನೆಯವರಿಗೆ ದುರ್ವಾಸನೆ ಬಂದ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ತಪಾಸಣೆ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡು ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ.










