
ಮಹಿಳೆಯರಿಗೆ ನೀಡಲಾಗುತ್ತಿರುವ ಶಕ್ತಿ ಯೋಜನೆ ಫ್ರೀ ಬಸ್ ಯೋಗ ಇನ್ನು ಮುಂದೆ ಗಂಡಸರಿಗೂ ವಿಸ್ತರಣೆಯಾಗಲಿದೆ. ಈ ಬಗ್ಗೆ ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ದೇಶದ ಪ್ರಥಮ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ

ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳೊಂ ದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉಪಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.







