
ಶಿವಮೊಗ್ಗದಲ್ಲಿ ಘೋರವಾದ ದುರಂತ ಸಂಭವಿಸಿದೆ ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಕಾಲುವೆಯಲ್ಲಿ ಮೀನು ಹಿಡಿಯಲು ಹೋದಾಗಲೇ ಒಂದು ದುರಂತ ಸಂಭವಿಸಿದೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಐವರು ಮಕ್ಕಳು ನಾಪತ್ತೆಯಾಗಿದ್ದಾರೆ.

ಧನುಷ್ (14 ಕಿರಣ್ (10) ಲೋಹಿತ್ (12) ಭುವನ್ (8) ಮತ್ತು ಲಕ್ಷ್ಮೀಶ (12) ನಾಪತ್ತೆಯಾದ ಮಕ್ಕಳು ಎಂದು ತಿಳಿದುಬಂದಿದೆ.ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ದಾಖಲಾಗಿದ್ದು, ಮಕ್ಕಳಿಗೆ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ನಡೆಸಿದ್ದುಸ್ಥಳೀಯರು ದೇವಸ್ಥಾನಕ್ಕೆಂದು ಹೋಗುತ್ತಿದ್ದ ವೇಳೆ ಐವರು ಮಕ್ಕಳು ದೇವಾಲಯದಲ್ಲಿ ಪತ್ತೆಯಾಗಿದ್ದು, ಮೀನು ಹಿಡಿಯಲು ಹೋಗಿದ್ದಕ್ಕೆ ಮನೆಯವರು ಬೈಯುತ್ತಾರೆ ಎಂದು ಭಯಗೊಂಡು ಮನೆಗೆ ಹೋಗದೆ ದೇವಾಲಯದಲ್ಲೇ ಉಳಿದಿದ್ದರು ಎನ್ನಲಾಗಿದೆ.

ಸದ್ಯ. ಮಕ್ಕಳು ತಮ್ಮ ತಮ್ಮ ಮನೆಗೆ ತಲುಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

