-ಕರುನಾಡಲ್ಲಿ ಕನ್ನಡದ ಕಹಳೆ – ಏನಿದು ಸರ್ಕಾರದ ಗಿಫ್ಟ್

ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀಡುವುದಾಗಿ ಹೇಳಿದರು.

ಉಚಿತ ವಿದ್ಯುತ್, ಕುಡಿಯುವ ನೀರು ಬೇಕು ಎಂದು ಶಿಕ್ಷಣ ಇಲಾಖೆ ಬೇಡಿಕೆ ಇಟ್ಟ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ತಮ್ಮ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುತ್ತಾ ಬಂದಿದೆ, ಈ ಸಮಯದಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಹಾಗೂ ವಿದ್ಯುತ್ ಅನ್ನು ಸರ್ಕಾರ ನೀಡಲಿದ್ದು, ಇದರ ಖರ್ಚನ್ನು ಭರಿಸುತ್ತೇವೆ ಎಂದು ಹೇಳಿದರು. ಉಚಿತ ವಿದ್ಯುತ್, ಕುಡಿಯುವ ನೀರು ಬೇಕು ಎಂದು ಶಿಕ್ಷಣ ಇಲಾಖೆ ಬೇಡಿಕೆ ಇಟ್ಟ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ತಮ್ಮ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುತ್ತಾ ಬಂದಿದೆ, ಈ ಸಮಯದಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಹಾಗೂ ವಿದ್ಯುತ್ ಅನ್ನು ಸರ್ಕಾರ ನೀಡಲಿದ್ದು, ಇದರ ಖರ್ಚನ್ನು ಭರಿಸುತ್ತೇವೆ ಎಂದು ಹೇಳಿದರು.