ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್​​ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ನಾಗರಿಕರು ಜಾಗೃತರಾಗಿರುವಂತೆ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ.ದಯಾನಂದ್​ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಅಪರಿಚಿತ ಲಿಂಕ್​, ಇ-ಮೇಲ್​ಗಳ‌ ಮೇಲೆ ನಿಗಾವಹಿಸಿ.ಎಕ್ಸ್​ಕ್ಲೂಸಿವ್ ನ್ಯೂಸ್ ಲಿಂಕ್​​ಗಳು ಹಾಗೂ ಎಪಿಕೆ ಫೈಲ್ಸ್​, ಅಪರಿಚಿತ ಫಾರ್ವರ್ಡ್ ಲಿಂಕ್​​ ಕ್ಲಿಕ್ ಮಾಡದಂತೆ,

ವಾಟ್ಸಾಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.ತುರ್ತಾಗಿ ಆರ್ಮಿ ನೇಮಕಾತಿ ಮತ್ತಿತರ ಕುರಿತು ಅಪರಿಚಿತರಿಂದ ಮೇಲ್‌ಗಳನ್ನು ಸ್ವೀಕರಿಸಿದರೆ ಅವುಗಳನ್ನು ತೆರೆಯದಿರಿ. ಅವುಗಳ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಕದಿಯುವ ಸಾಧ್ಯತೆಗಳಿವೆ.

Oplus_131072

ವಾಟ್ಸ್‌ಆಯಪ್‌ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಸ್ವೀಕರಿಸುವ ಅಪರಿಚಿತರ ಸಂದೇಶಗಳನ್ನು ತೆರೆಯದಿರಿ. ನಿಮ್ಮ ಪರಿಚಿತರಿಂದಲೇ ಅನುಮಾನಾಸ್ಪದ ಫೈಲ್‌ಗಳನ್ನು ಸ್ವೀಕರಿಸಿದರೂ ಸಹ ತೆರೆಯದಿರಿ ಹಾಗೂ ಇತರರೊಂದಿಗೆ ಹಂಚಿಕೊಳ್ಳದಿರಿ,

Oplus_131072

ಬದಲಿಗೆ ಅವುಗಳನ್ನು ಡಿಲೀಟ್ ಮಾಡುವುದು ಸೂಕ್ತ ಎಂದು ಸಂದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *