


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿ ರಸ್ತೆ, ಮನೆಗಳು ಜಲಾವೃತವಾಗಿದ್ದು, ಜನ ಜೀವನ ಅಸ್ತ ವ್ಯಾಸ್ತ ವಾಗಿದೆ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ.ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ಬೆಂಗಳೂರಿನ ಬಹುತೇಕ ರಸ್ತೆಗಳು ಜಲಾವೃತವಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ.ಇನ್ನು ಜನರ ಕಷ್ಟಕ್ಕೆ ಸ್ಪಂದಿಸದ ಸರ್ಕಾರದ ವಿರುದ್ಧ ಜನ ಹಿಡಿ ಶಾಪ ಹಾಕುತಿದ್ದಾರೆ.ವಿಪಕ್ಷ ಬಿಜೆಪಿ ಇದೇ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದೆ.

