ಹೊಸ ದಾಖಲೆ ನಿರ್ಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಖನೌ ಸೂಪರ್ ಜೈಂಟ್ಸ್ ಎದುರು ದಾಖಲೆಯ ಭರ್ಜರಿ ಜಯ ಸಾಧಿಸಿದೆ.

Oplus_131072

ಲಖನೌ ನೀಡಿದ್ದ 228 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು ಕೇವಲ 4 ವಿಕೆಟ್ ಕಳೆದುಕೊಂಡು ಇನ್ನೂ 8 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಜೊತೆಗೆ ಮೊದಲ ಕ್ವಾಲಿಫೈಯರ್ ಆಡಲು ಅರ್ಹತೆಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಆರ್ ಸಿ ಬಿ ಯ ಮತ್ತೊಂದು ಸಾಧನೆ ಎಂದರೆ ಆರ್‌ಸಿಬಿ ತವರಿನಾಚೆ ಎಲ್ಲಾ 7 ಪಂದ್ಯಗಳನ್ನು ಗೆದ್ದ ಮೊದಲ ತಂಡ ಎನ್ನುವ ಹೊಸ ದಾಖಲೆ ನಿರ್ಮಿಸಿದೆ.

Leave a Reply

Your email address will not be published. Required fields are marked *