Oplus_131072

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ದೇವಂಗಿ ಬಳಿ ಟಿಂಬರ್‌ ನಾಟ ಲೋಡ್ ಮಾಡುವ ವೇಳೆ ನಾಟ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ಸಕ್ರೆಬೈಲು ನಿವಾಸಿ, ಯೋಗೇಶ್ (50) ಎಂದು ಗುರುತಿಸಲಾಗಿದೆ. ಯೋಗೇಶ್ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ದೇವಂಗಿ ಸಮೀಪ ಟಿಂಬರ್‌ ನಾಟವನ್ನು ಲೋಡ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಆಕಸ್ಮಿಕವಾಗಿ ನಾಟ ಅವರ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಯೋಗೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *