Oplus_131072

ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಪಶ್ಚಿಮ ಬಂಗಾಳ ಮೂಲದ 1) ಅಲೋಕ್ ಮಂಡಲ್ (34), 2) ಶ್ರೀಬಾಷ್ ಸರ್ಕಾರ್ (20), 3) ಅಮ್ರಿತ್ ಮಂಡಲ್ (27), 4) ಸಂಕರ್ ಬ್ಯಾಪಾರಿ (28) ಮತ್ತು 5) ಹರಧನ್ ಮಂಡಲ್ (32) ಎಂಬುವರನ್ನ ಬಂಧಿಸಿದ್ದ ಪೊಲೀಸ್ ತಂಡ. ಸುಮಾರು 1 ಕೆಜಿ 564 ಗ್ರಾಂ ತೂಕದಗಾಂಜಾ, ₹3550 ನಗದು ಮತ್ತು 5 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿತ್ತು.

ಅಷ್ಟೆ ಅಲ್ಲದೆ, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii)(B), 27(b) NDPS ಕಾಯ್ದೆ ಅಡಿ ಕೇಸ್ ದಾಖಲು ಮಾಡಲಾಗಿತ್ತು.

Leave a Reply

Your email address will not be published. Required fields are marked *