
ಬೆಂಗಳೂರು :ಓಲಾ, ಉಬರ್ ಆಯಪ್ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಆಂಬ್ಯುಲೆನ್ಸ್ ಸೇವಾ ಗ್ರಾಹಕರಿಗೂ ನೀಡಬೇಕಿದೆ. ಈ ನಿಟ್ಟಿನಲ್ಲಿ ಪಾರದರ್ಶಕ ಆಯ್ಕೆ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ.

ಜೊತೆಗೆ ಖಾಸಗಿ ಸಂಸ್ಥೆ ಮೂಲಕ ನಡೆಸುತ್ತಿರುವ 108 ಆರೋಗ್ಯ ಸೇವೆಯನ್ನು ಕೂಡ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲಾಗುವುದು.

ಈ ವಾಹನಗಳು ಡಿಸಿ, ಸಿಇಒ, ಡಿಎಚ್ಒ ಕಂಟ್ರೋಲ್ನಲ್ಲಿ ಇರಲಿವೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

