Oplus_0

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಇಂದು ದೂರುದಾರ ಮಾಸ್ಕ್ ಮ್ಯಾನ್ ಸಿ.ಎಸ್ ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದೆ. ಇದೀಗ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ ಎಸ್ ಐ ಟಿ (SIT) ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.ಇದೀಗ ಕೋರ್ಟ್ ವಿಧಿಸಿ ಆದೇಶ ಹೊರಡಿಸಿದೆ.ನಿನ್ನೆಯಿಂದ ಇಂದಿನವರೆಗೆ ಸುದೀರ್ಘ ವಿಚಾರಣೆ ನಡೆಸಿದ ಎಸ್ ಐ ಟಿ ಪೊಲೀಸರು ಇಂದು ಮಾಸ್ಕ್ ಮ್ಯಾನ್ ನನ್ನು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಪೊಲೀಸರ ಮನವಿ ಸ್ವೀಕರಿಸಿದ ಕೋರ್ಟ್ ಮಾಸ್ಕ್ ಚಿನ್ನಯ್ಯನನ್ನು 10 ದಿನ ಎಸ್ ಐ ಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. *ಮಾಸ್ಕ್ ಮ್ಯಾನ್ ಯಾರು ಹಿನ್ನಲೆಯೇನು* ಅನಾಮಿಕ ಮಾಸ್ಕ್​ಮ್ಯಾನ್ ​​ನನ್ನು ಇದೀಗ ಎಸ್​​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್​ಮ್ಯಾನ್​ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಸ್ವತಃ ಎಸ್‌ಐಟಿ ಅಧಿಕಾರಿಗಳು ದಾಖಲೆ ಸಮೇತ ಈತ ಮಂಡ್ಯದ ಚಿಕ್ಕಬಳ್ಳಿ ಗ್ರಾಮದವನು ಎಂದು ಬಯಲು ಮಾಡಿದ್ದಾರೆ.

Leave a Reply

Your email address will not be published. Required fields are marked *