ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಕೃಷಿಕ ನೋರ್ವ ಹಳ್ಳಕ್ಕೆ ಬಿದ್ದು ಮೃತ ಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾವಿಕೆರೆಯ ಕೃಷಿಕ ಚಂದ್ರಶೇಖರ (50) ಮೃತ ಪಟ್ಟ ದುರ್ದೈವಿ. ಗುರುವಾರ ಕೃಷಿ ಕೆಲಸದ ನಿಮಿತ್ತ ತೆರಳಿದ್ದಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣ ಆಗುಂಬೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *