ಶಿವಮೊಗ್ಗ :14 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ಕೊಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿರುವ ಬಾಲಕಿ ಹೊಟ್ಟೆ ನೋವೆಂದು ಶಾಲೆಗೆ ರಜೆ ಹಾಕಿದ್ದಳು.

ಎರಡು ದಿನದ ಬಳಿಕ ಬಾಲಕಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.ತಕ್ಷಣ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಮಗುವನ್ನು ರಕ್ಷಿಸಿ ಚಿಕಿತ್ಸೆ ನೀಡಿದ್ದಾರೆ. ವೈದ್ಯರ ಪ್ರಕಾರ 7 ತಿಂಗಳಿಗೆ ಜನ್ಮ ನೀಡಿದ್ದು ಮಗು ಒಂದೂವರೆ ಕೆಜಿ ಇದ್ದು ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ.ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *