ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಸೆ.29ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದಲ್ಲದೆ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ದಕ್ಷಿಣ ಒಳನಾಡಿನ ರಾಮನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *