

ಪಾಕಿಸ್ತಾನಕ್ಕೆ ಭಾರಿ ಮುಖಭಂಗ – ಇಂಡಿಯಾ ಆಟಗಾರರು ಟ್ರೊಫಿ ಪಡೆಯಲು ನಿರಾಕರಿಸಿದ್ದು ಯಾಕೆ?

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾಕಪ್ 2025 ಫೈನಲ್ನಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 5 ವಿಕೆಟ್ಗಳಿಂದ ಮಣಿಸಿ ದಾಖಲೆಯ 9ನೇ ಬಾರಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. ಈ ಗೆಲುವಿನಿಂದ ಭಾರತ ಏಷ್ಯಾಕಪ್ನಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದೆ.ಟೀಂ ಇಂಡಿಯಾ ಗೆಲುವಿನ ಬಳಿಕ ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಯಿತು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ, ‘ಮೈದಾನದಲ್ಲಿ ಆಪರೇಷನ್ ಸಿಂಧೂರ್. ಫಲಿತಾಂಶ ಒಂದೇ: ಭಾರತಕ್ಕೆ ಜಯ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ. *ಟ್ರೊಫಿ ಸ್ವೀಕರಿಸಲು ನಿರಾಕರಿಸಿದ ಟೀಮ್ ಇಂಡಿಯಾ* ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನ ಅದ್ಯಕ್ಷರಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ನ ಅಧ್ಯಕ್ಷರಾದ ಮೊಹ್ಸಿನ್ ನಖ್ವಿ ಟ್ರೋಫಿ ನೀಡಲು ಪೋಡಿಯಂನಲ್ಲಿ ಕಾಯುತ್ತಿದ್ದರು. ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿತು. ಅಲ್ಲದೆ ಅವರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಲು ಟೀಮ್ ಇಂಡಿಯಾ ಹಿಂದೇಟು ಹಾಕಿದ್ದು. ಈ ಮೂಲಕ ಭಾರತ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರನ್ನು ಅವಮಾನಿಸಿತು.

