

ಶಿವಮೊಗ್ಗ : ರಜೆಯ ಮಜದಲ್ಲಿ ಕಾಲ ಕಳೆಯುತಿದ್ದ ಮಕ್ಕಳಿಗೆ ಹಾಗೂ ಗಣತಿದಾರರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ
ಆದೇಶ ಪತ್ರದಲ್ಲೇನಿದೆ
ಇದಕ್ಕೆ ಸಂಬಂಧಿಸಿದಂತೆ, ಉಲ್ಲೇಖ (3) ರ ಆದೇಶದಲ್ಲಿರುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ: 22-09-2025 ರಿಂದ ಪ್ರಾರಂಭಿಸಲಾಗಿದೆ.


ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ: ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತುಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 24-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ಕೈಗೊಂಡು ದಿನಾಂಕ: 24-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.

ರಾಜ್ಯದ ಇತರೆ ಭಾಗಗಳಲ್ಲಿ (ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು): ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು.ವಿಶೇಷ ಸೂಚನೆ:- ಕಾಲಕಾಲಕ್ಕೆ ಸರ್ಕಾರದಿಂದ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

