

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪದ ಮೇಲೆ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ನಡೆಯುತ್ತಿದ್ದ ಜಾಲಿವುಡ್ಸ್ಟೂಡಿಯೋಸ್ ಮನೆಯನ್ನು ಬಂದ್ ಮಾಡಿಸಲಾಗಿತ್ತು.

ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಿಲ್ಲಾಧಿಕಾರಿಗಳಿಗೆ ಮನವಿ ಹಿನ್ನಲೆ ಇದೊಂದು ಬಾರಿ ಅನುಮತಿ ನೀಡುವಂತೆ’ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಖಚಿತಪಡಿಸಿದರು. ಒಮ್ಮೆ ತಪ್ಪು ಸರಿ ಮಾಡಿಕೊಳ್ಳಲು ಅವಕಾಶ ಕೊಡಿ ಎಂದಿದ್ದೇನೆ ಎಂದರು.

