

ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ.27000 ಸಾವಿರಗಳಿಗೆ ಹೆಚ್ಚಳ ಮಾಡಿದೆ.

ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.ಯಾರಿಗೆಲ್ಲಾ ಅನ್ವಯ?ರಾಜ್ಯ ಸರ್ಕಾರಿ ನೌಕರರು: 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಈ ಆದೇಶ ಅನ್ವಯವಾಗುತ್ತದೆ.ನಿವೃತ್ತಿ ವೇತನದಾರರು: ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ 5, ಹಾಗೂ ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಿದ ದರಗಳು.

ದಿನಾಂಕ 1ನೇ ಜುಲೈ 2025 ರಿಂದ ಜಾರಿಗೆ ಬರಲಿವೆ.ಇತರೆ ನೌಕರರು: ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ಚಾರ್ಜ್ ನೌಕರರಿಗೆ, ಮತ್ತು ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.ಯುಜಿಸಿ ನೌಕರರು: ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. (ಆದರೆ, ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.)

