

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇ -ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ.ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು,

ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು.ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ. ನಿಯಮಗಳಂತೆ ಹದಿನೈದು ದಿನಗಳೊಳಗಾಗಿ ತಂತ್ರಾಂಶದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತಂದು ಗ್ರಾಮೀಣ ಜನರಿಗೆ ಸೌಲಭ್ಯವನ್ನು ಒದಗಿಸಲಾಗುವುದು.ಈ ಕುರಿತು ಮಾಹಿತಿ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ‘ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ರದ್ದು ಮಾಡಲಾಗಿದೆ.

ಹೊಸದಾಗಿ ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕ ನಿಯಮಗಳನ್ನು ರೂಪಿಸಿ ಅಧಿಸೂಚನೆ ಹೊರಡಿಸಲಾಗಿದೆ. ತೆರಿಗೆ, ಶುಲ್ಕ, ನಿರಾಕ್ಷೇಪಣಾ (ಎನ್ಒಸಿ) ಪರವಾನಗಿ ದರಗಳನ್ನು ವೈಜ್ಞಾನಿಕವಾಗಿ ನಿಗದಿ ಮಾಡಲಾಗಿದ್ದು, ಆ ಮೂಲಕ ಗ್ರಾಮಗಳಲ್ಲಿ ಇ-ಸ್ವತ್ತು ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲು ಇದ್ದ ಎಲ್ಲ ಅಡತಡೆಗಳನ್ನು ನಿವಾರಣೆ ಮಾಡಲಾಗಿದೆ’ ಎಂದಿದ್ದಾರೆ.

ಬೇಕಾದ ದಾಖಲೆ* – ಭೂ ನೋಂದಣಿ ಪ್ರಮಾಣಪತ್ರ- 2025ನೇ ಏಪ್ರಿಲ್ಗೂ ಹಿಂದಿನ ತೆರಿಗೆ ಪಾವತಿ ರಸೀದಿ- ವಿದ್ಯುತ್ ಬಿಲ್, ಋಣಭಾರ ಪ್ರಮಾಣಪತ್ರ (ಇಸಿ)- ಭೂಪರಿವರ್ತನೆ ಆದೇಶ (ಇದ್ದರೆ ಮಾತ್ರ)- ಬಡಾವಣೆ ಅನುಮೋದಿತ ವಿನ್ಯಾಸ (ಇದ್ದರೆ)- ನೋಂದಾಯಿತ ಪರಿತ್ಯಾಜನಾ ಪತ್ರ- ಭೂ ಮಂಜೂರಾತಿ ಆದೇಶ


