
ಶಿವಮೊಗ್ಗ : ಪ್ರಯಾಣಿಕರಿಗೆ ಅನುಕೂಲವಾಗುವ ಉದ್ದೇಶದಿಂದ ನಗರದಲ್ಲಿ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್ಗಳ ತೆರೆಯಲಾಗುತ್ತಿದೆ.ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಮುಂಜಾನೆ 4.45, ಬೆಳಿಗ್ಗೆ 11ಕ್ಕೆ, ಸಂಜೆ 7.30 ಹಾಗೂ ರಾತ್ರಿ 9.30ರ ಸಮಯದಲ್ಲಿ ಪ್ರಯಾಣಿಕರು ಮನೆಗೆ ತೆರಳಲು ಆಟೊ ರಿಕ್ಷಾಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಈ ಸಲುವಾಗಿ ರೈಲ್ವೆ ನಿಲ್ದಾಣದ ಬಳಿಯ ಪ್ರೀ ಪೈಯ್ಡ್ ಕೌಂಟರ್ಗೆ ಹೆಚ್ಚಿನ ಸಿಬ್ಬಂದಿ ನೇಮಿಸುವಂತೆ ಹಾಗೂ ಕೌಂಟರ್ನಲ್ಲಿ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ನಿರ್ವಹಣೆ ಮಾಡುತ್ತಿರುವ ಚೈತನ್ಯ ರೂರಲ್ ಡೆವಲಪ್ಮೆಂಟ್ ಸಂಸ್ಥೆ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.


