ಸರ್ಕಾರದ ಆದೇಶದಲ್ಲಿ ಸರ್ಕಾರದ ಆದೇಶ ಸಂಖ್ಯೆ:ಸಕಇ 225 ಬಿಸಿಎ 2000, ದಿನಾಂಕ:30.03.2002ರ ಜಾತಿ ಪಟ್ಟಿಯಲ್ಲಿ ಪ್ರವರ್ಗ 2’ಎ’ರಲ್ಲಿ ಕ್ರಮ ಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ-ಬಿಲ್ಲವ ಸೇರಿದಂತೆ ನಮೂದಾಗಿರುವ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಲಾಗಿದೆ.ಮೇಲೆ (2) ರಲ್ಲಿ ಓದಲಾದ ಪತ್ರದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಬಿವೃಧಿ ನಿಗಮ ಇವರು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಕಾರ್ಯಗಳು, ಸ್ವರೂಪ ಕಾರ್ಯಕ್ರಮಗಳಿಗೆ ಅನುಗುಣವಾಗಿ Memorandum of Association and Articles of Association ಅನ್ನು ಸಿದ್ಧಪಡಿಸಿ ರೂಪುರೇಷೆಗಳು, ಸರ್ಕಾರದ ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಹಾಗೂಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಹಿಂವಕ 388 ಬಿಸಿಎ 2025, ಬೆಂಗಳೂರು, ದಿನಾಂಕ: 03.01.2026.ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ: ಹಿಂವಕ 214 ಬಿಸಿಎ 2022, ದಿನಾಂಕ:20-02-2023ರ ಆದೇಶದಲ್ಲಿ ಈಡಿಗ-ಬಿಲ್ಲವ ಸೇರಿದಂತೆ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಸ್ಥಾಪಿಸಿರುವ ನಾರಾಯಣ Memorandum of Association & Articles of Association ಕೆಳಕಂಡ ಷರತ್ತುಗಳಿಗೊಳಪಟ್ಟು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ.ಷರತ್ತುಗಳು:-1. ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ನಿಯಮಿತವನ್ನು ಕಂಪನಿಗಳ ಕಾಯ್ದೆ, 2013ರ ಅಡಿಯಲ್ಲಿ ನೋಂದಾಯಿಸಿ ಸ್ಥಾಪಿಸತಕ್ಕದ್ದು.2. ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿ ಇರುವಂತೆ ಶ್ರೀ ನಾರಾಯಣ ಗುರು Memorandum of Association and Articles of Association ಗಳನ್ನು ಅನುಮೋದಿಸಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳತಕ್ಕದ್ದು.3. ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ನಿಯಮಿತದ ಸ್ಥಾಪನೆಗಾಗಿ ತಗಲುವ ಪ್ರಾರಂಭಿಕ ವೆಚ್ಚಗಳಾದ ರಿಜಿಸ್ಟ್ರೇಷನ್ ಫಿ, ಫೈಲಿಂಗ್ ಫೀ, ಪ್ರಾರಂಭಿಕ ಷೇರುಗಳ ಖರೀದಿ ಮೊದಲಾದ ವೆಚ್ಚಗಳನ್ನು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಭರಿಸುವುದು.

ನಂತರ ಈ ಮೊತ್ತವನ್ನು ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ನಿಯಮಿತದಿಂದ ವಾಪಸ್ಸು ಪಡೆಯತಕ್ಕದ್ದು,4. ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ನಿಯಮಿತವನ್ನು ಕಂಪನಿಗಳ ಕಾಯ್ದೆ, 2013 ರ ಅಡಿಯಲ್ಲಿ ಕಂಪನಿಯಾಗಿ ರಿಜಿಸ್ಟ್ರಾರ್ ಆಫ್ ಕಂಪನೀಸ್, ಕಾರ್ಪೊರೇಟ್ ಅಫೇರ್ಸ್ ಮಂತ್ರಾಲಯ, ಭಾರತ ಸರ್ಕಾರ ಇವರಲ್ಲಿ ನೋಂದಾಯಿಸತಕ್ಕದ್ದು, ಹೀಗೆ ನೊಂದಾಯಿಸುವಾಗ ಆಗಬಹುದಾದ ಸಣ್ಣ-ಪುಟ್ಟ ತಿದ್ದುಪಡಿಗಳನ್ನು ಅಳವಡಿಸಲು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಇವರಿಗೆ ಅಧಿಕಾರ ನೀಡಿದೆ.5. ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ನಿಯಮಿತಕ್ಕೆ ವ್ಯವಸ್ಥಾಪಕ ನಿರ್ದೇಶಕರು ನಿಯೋಜನೆ ಆಗುವವರೆಗೆ, ಸದರಿ ನಿಗಮದ ಹೆಚ್ಚುವರಿ ಕಾರ್ಯಭಾರವನ್ನು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ನಿರ್ವಹಿಸತಕ್ಕದ್ದು.ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 798 ವೆಚ್ಚ-3/2025 ದಿನಾಂಕ: 16.12.2025 ಮತ್ತು ಕಾನೂನು ಇಲಾಖೆಯ ಅಭಿಪ್ರಾಯ ಸಂಖ್ಯೆ ಲಾ 902 ಅಭಿ 2025, ದಿ.31.12.2025 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ.

Leave a Reply

Your email address will not be published. Required fields are marked *