
ಶಿವಮೊಗ್ಗ : ಹೊಸನಗರ ತಾಲೂಕಿನ ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನಕಲುಕುವ ಘಟನೆ ಸಂಭವಿಸಿದ್ದು, ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ.ಕುಟುಂಬಸ್ಥರ ಮಾಹಿತಿ ಪ್ರಕಾರ, ಗುರುರಾಜ್ ಅವರು ಕೆಲಕಾಲದಿಂದ ಸಾಲ ಭಾದೆಯಿಂದ ಬಳಲುತಿದ್ದು ಈ ಹಿನ್ನಲೆಯಲ್ಲಿ ಬೇಸತ್ತ ಅವರು ಮಂಗಳವಾರ ಮನೆ ಸಮೀಪದ ಕೊಟ್ಟಿಗೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


