– ಮೂವರು ಆರೋಪಿಗಳ ಬಂಧನ

ರಾಜ್ಯದಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದೆ, ಮಂಡ್ಯದಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ನನ್ನ ಮಗಳನ್ನು ಪುಸಲಾಯಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ, ಮನೆಗೆ ಬಂದು ಕಿರುಕುಳ ನೀಡುತ್ತಿರೋದಾಗಿ ದೂರಿನಲ್ಲಿ ಹೆತ್ತವರು ತಿಳಿಸಿದ್ದಾರೆ.ಪುನೀತ್, ಮಂಜುನಾಥ ಹಾಗೂ ಸಿದ್ಧಾರ್ಥ ಸಾಮೂಹಿಕ ಅತ್ಯಾಚಾರದ ಬಳಿಕ, ಈ ದೃಶ್ಯವನ್ನು ವೀಡಿಯೋದಲ್ಲಿ ಚಿತ್ರೀಕರಿಸಿಕೊಂಡು ಯಾರಿಗಾದ್ರೂ ಹೇಳಿದರೇ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋವನ್ನು ಹರಿ ಬಿಡೋದಾಗಿ ಬೆದರಿಕೆ ಹಾಕಿದ್ದಾರೆ.ಇನ್ನು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡುತ್ತಿದ್ದಾರೆ.