• 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಫಾರ್ಮ್ ನಲ್ಲಿರುವ ಕನ್ನಡಿಗ ಕೆಎಲ್ ರಾಹುಲ್.
  • ಬ್ಯಾಟಿಂಗ್ ಜೊತೆ ವಿಕೆಟ್ ಕೀಪರ್ ಆಗಿಯೂ ತಂಡದ ಗೆಲುವಿಗೆ ಉತ್ತಮ ಕೊಡುಗೆ ನೀಡುತ್ತಿರುವ ಮಧ್ಯಮ ಕ್ರಮಾಂಕದ ಬ್ಯಾಟರ್.
  • ಟೀಮ್ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ಯುವ ವಿಕೆಟ್ ಕೀಪರ್, ಬ್ಯಾಟರ್ ರಾಹುಲ್ ಅವರನ್ನು ಗುಣಗಾಣ ಮಾಡಿದ್ದಾರೆ.

2023ರ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಹ್ಯಾಟ್ರಿಕ್ ಜಯ ಸಾಧಿಸಿ ಭಾನುವಾರ (ಅ.22) ಧರ್ಮಶಾಲಾದ ಎಚ್ ಪಿಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಸವಾಲು ಎದುರಿಸಲು ಸಜ್ಜಾಗಿದೆ. ಈ ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೀಮ್ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ಕನ್ನಡಿಗ ಕೆ.ಎಲ್.ರಾಹುಲ್ ಅವರ ವಿಕೆಟ್ ಕೀಪಿಂಗ್ ಕೌಶಲ್ಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.