
ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಳಸ ತಾಲೂಕಿನ ಕಗ್ಗನಾಳ ಬಳಿ ನ.24ರ ಭಾನುವಾರ ನಡೆದಿದೆ.

ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ ತೆರಳುತ್ತಿದ್ದ ಲಾರಿ ನಡುವೆ ಕಗ್ಗನಾಳದ ಕಿರುಸೇತುವೆ ಬಳಿ ಅಪಘಾತ ನಡೆದಿದ್ದು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿತ್ತು.ಇನ್ನು ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.


ಜಿಲ್ಲೆಯ ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








