- ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು

ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜಿನ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗಿದೆ.ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು ಉಪನ್ಯಾಸಕ ಪುನೀತ್ ವಿರುದ್ಧ ಇಂತಹ ಆರೋಪ ಕೇಳಿಬಂದಿದೆ. ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ತನಗೆ ಮದುವೆಯಾಗುವುದಾಗಿ ಉಪನ್ಯಾಸಕ ಪುನೀತ್ ನಂಬಿಸಿದ್ದ.. ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ.ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ.. ಈಗ ಮದುವೆಗೆ ಒಲ್ಲೆ ಎನ್ನುತ್ತಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪ ಮಾಡಿದ್ದಾಳೆ.





