ನಟ ಶಿವರಾಜ್ಕುಮಾರ್ ಅವರು ಕ್ಯಾನ್ಸರ್ಮುಕ್ತವಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿದ್ದು ಸದ್ಯ ಕುಟುಂಬದ ಜೊತೆಗೆ ಪ್ರವಾಸದಲ್ಲಿದ್ದಾರೆ.

ಏಕಕಾಲಕ್ಕೆ 6 ಆಪರೇಷನ್ ನಡೆಯಿತು. ಕರುಳಿನ ಒಂದು ಭಾಗವನ್ನು ತೆಗೆದು, ಅದನ್ನೇ ಯೂರಿನ್ ಬ್ಲಾಡರ್ ಆಗಿ ಮಾಡುತ್ತಾರೆ. ಒಳಗಿನಿಂದ 190 ಹೊಲಿಗೆ ಹಾಕಲಾಗಿದೆ.

ನಾವು ಇದನ್ನೆಲ್ಲ ವಿವರವಾಗಿ ಹೇಳಿರಲಿಲ್ಲ. ಐದೂವರೆ ಗಂಟೆ ಸರ್ಜರಿ ಪ್ಲ್ಯಾನ್ ಮಾಡಲಾಗಿತ್ತು. 5 ಗಂಟೆ ಒಳಗೆ ಮುಗಿಸಿದರು. ಯಾವುದೇ ತೊಂದರೆ ಆಗಲಿಲ್ಲ. 4 ಗಂಟೆ ಒಳಗೆ ನಾವು ಹೋಗಿ ಮಾತನಾಡಿಸಿದೆವು’ ಎಂದು ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.




