Oplus_131072

ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ.ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ 12 ಗಂಟೆಯ ನಂತರ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ತಿಳಿದು ಬಂದಿದೆ. ಸುದೀಪ್ ಅವರ ತಾಯಿ ಸರೋಜಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಜೆಪಿ ನಗರದ ನಿವಾಸದತ್ತ ದೌಡಯಿಸಿದ್ದಾರೆ.ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

Oplus_131072

Leave a Reply

Your email address will not be published. Required fields are marked *